ಹಲೋ ಸ್ನೇಹಿತರೇ, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ಸರಾಗಗೊಳಿಸಲು ರಾಜ್ಯ ಸರ್ಕಾರ ನಿರ್ಧರ ಮಾಡಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆದುಕೊಳ್ಳಬಹುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಇದರ ಬಗ್ಗೆ ಇನ್ನು ಹೆಚ್ಚು ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ.
ಡಿಸೆಂಬರ್ 21: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸುತ್ತಿರುವ ಮನೆಗಳ ಪೈಕಿ ಕೊನೆಯ ಹಂತದಲ್ಲಿರುವ 48,796 ಮನೆಗಳ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂ. ಮಾತ್ರ ಸಂಗ್ರಹ ಮಾಡಿಕೊಂಡು ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸುವುದಾಗಿ ಸಂಪುಟ ತೀರ್ಮಾನಿಸಿದೆ.
ಇಂದು (ಡಿಸೆಂಬರ್ 21) ನಡೆದ ಮಹತ್ವದ ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್.ಕೆ. ಪಾಟೀಲ್ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ಸರಾಗಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆಯಬಹುದಾಗಿದೆ. ಇದನ್ನು ಕಾಂಗ್ರೆಸ್ ಚುನಾವಣೆಗೆ ಮುನ್ನ ಘೋಷಿಸದೇ ಇರುವ 6 ಗ್ಯಾರಂಟಿ ಎಂದು ಇದನ್ನು ಪರಿಗಣಿಸಬಹುದು ಎಂದು ಹೇಳಿದರು.
ಆವಾಸ್ ಯೋಜನೆಯಡಿ 2015ರಲ್ಲಿ 1,80,253 ಮನೆಗಳು ಮಂಜೂರು ಮಾಡಲಾಗಿತ್ತು. ಆದರೆ, 2015ರಿಂದ 2023ರ ವರೆಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಒಂದೇ ಒಂದು ಮನೆಯನ್ನು ಕೊಡಲು ಸಾಧ್ಯವಾಗಿಲ್ಲ. 2015ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರತಿ ವರ್ಷವೂ ಒಂದಷ್ಟು ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. 2018ರಿಂದ ಒಂದೇ ಒಂದು ಮನೆಯನ್ನು ಮಂಜೂರಾತಿ ನೀಡಿಲ್ಲಾ.
ಆವಾಸ್ ಯೋಜನೆಯ ಪ್ರಕಾರ ಫಲಾನುಭವಿಗಳು 4.5 ಲಕ್ಷ ರೂ. ಪಾವತಿಸಬೇಕಾಗುತ್ತದೆ. ಕೇಂದ್ರ ಸರಕಾರ 1.5 ಲಕ್ಷ ರೂ.ಗಳನ್ನು ನೀಡುತ್ತದೆ, ರಾಜ್ಯ ಸರಕಾರ ಒಂದು ಲಕ್ಷ ರೂ.ಗಳನ್ನು ನೀಡಬೇಕು. ಆದರೆ, ರಾಜ್ಯ ಸರ್ಕಾರ ಇದುವರೆಗೂ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಿಲ್ಲ. ಜೊತೆಗೆ ಹಲವಾರು ಫಲಾನುಭವಿಗಳು 4.5 ಲಕ್ಷ ರೂ.ಗಳನ್ನು ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.
ಈಗ ಸರ್ಕಾರ ಮಾಡುವುದೇನು?
ಹೊಸ ಯೋಜನೆ ಪ್ರಕಾರ ರಾಜ್ಯ ಸರ್ಕಾರವು 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಒಪ್ಪಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಣ ಬಿಡುಗಡೆಗೆ ಒಪ್ಪಿದ್ದಾರೆ. ಈಗ ಮನೆ ಪಡೆಯುವ ಫಲಾನುಭವಿಗಳು ಕೇವಲ 1 ಲಕ್ಷ ರೂ. ಕಟ್ಟಿದರೆ ಸಾಕು. ಕೇಂದ್ರ ಸರ್ಕಾರ ಒಂದುವರೆ ಲಕ್ಷವನ್ನು ಕೊಡುತ್ತದೆಯಾದರೂ ಈ ಮೊತ್ತವನ್ನು ಅದು ಜಿಎಸ್ಟಿ ಮೂಲಕ ಮತ್ತೆ ಮರಳಿ ಪಡೆಯುತ್ತದೆ ಎಂದು ಜಮೀರ್ ಅಹಮ್ಮದ್ ಖಾನ್ ತಿಳಿಸಿದರು.
ರಾಜ್ಯದಲ್ಲಿ 1.8 ಲಕ್ಷ ಮನೆಗಳು ನಿರ್ಮಾಣದ ಹಂತದಲ್ಲಿವೆ. ಈಗ ಇವುಗಳನ್ನು ಪೂರ್ಣಗೊಳಿಸಲು 6,170 ಕೋಟಿ ರೂ ಬೇಕಾಗಿದೆ. ಇದರಲ್ಲಿ 5,403 ಕೋಟಿ ಫಲಾನುಭವಿಗಳ ಮೂಲಕ ಬರಬೇಕಿದೆ.
ಇತರೆ ವಿಷಯಗಳು
ಕ್ರಿಸ್ ಮಸ್-ನ್ಯೂ ಇಯರ್ ಮಧ್ಯೆ ಮತ್ತೆ ಕೊರೋನಾ.!! 60 ವರ್ಷ ಮೇಲ್ಪಟ್ಟವರಿಗೆ ಹೊಸ ರೂಲ್ಸ್
SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್‌ನಲ್ಲಿ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ