rtgh

News

ಬಿಯರ್ ಪ್ರಿಯರಿಗೆ ದರ ಏರಿಕೆ ಬಿಸಿ.! ಅಬಕಾರಿ ಸುಂಕ ಹೆಚ್ಚಳಕ್ಕೆ ಮುಂದಾದ ಸರ್ಕಾರ

Published

on

ಹಲೋ ಸ್ನೇಹಿತರೇ, ಬಡವರ ನೆಚ್ಚಿನ ಮದ್ಯದ ಬ್ರ್ಯಾಂಡ್ ಬೆಲೆ ಹೆಚ್ಚಳ ಮಾಡಿರುವುದಾಗಿ ಇತ್ತೀಚೆಗೆ ವರದಿಯಾಗಿದೆ. ಅದಕ್ಕೆ ಸುಂಕ ಹೆಚ್ಚಳ ಮಾಡಿಲ್ಲ ಎಂದು ಸರ್ಕಾರ ಸ್ಪಷ್ಟನೆಯನ್ನು ನೀಡಿತ್ತು. ಆದರೆ ಈಗ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಗೆ ಮಾಡಲು ನಿಯಮಗಳಿಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. ಎಷ್ಟು ಹೆಚ್ಚಿಗೆ ಮಾಡಲಾಗುವುದು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

beer price increase

ಕರ್ನಾಟಕ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (AED) ಮತ್ತೊಮ್ಮೆ ಹೆಚ್ಚಿಸಲು ನಿರ್ಧರಿಸಿರುವ ಬಗ್ಗೆ ವರದಿಯಾಗಿದೆ. ಒಂದು ವೇಳೆ ಇದು ನಿಜವಾದಲ್ಲಿ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಏರಿಕೆಯಾಗಲಿದೆ. ‘ಕರ್ನಾಟಕ ಅಬಕಾರಿ ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದೆ, ಇದರಲ್ಲಿ ದರ ಏರಿಕೆಯನ್ನು ಪ್ರಸ್ತಾಪಿಸಲಾಗಿದೆ. ಬೆಲೆ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ / ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳ ಮೂಲಕ ತಿಳಿಯಲಾಗಿದೆ.

ಕಾಂಗ್ರೆಸ್ ಸರ್ಕಾರದ 5 ಉಚಿತ ಗ್ಯಾರಂಟಿಗಳಿಗೆ ಹಣ ಹೊಂದಿಸುವುದಕ್ಕಾಗಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿರಬಹುದು ಎಂಬುದನ್ನು ಉಲ್ಲೇಕ ಮಾಡಲಾಗಿದೆ.


ಕರ್ನಾಟಕದಲ್ಲಿ ತಯಾರಿಸಲಾದ / ರಾಜ್ಯಕ್ಕೆ ಆಮದು ಮಾಡಿಕೊಳ್ಳುವ ಬಿಯರ್‌ ಬಾಟಲಿಯ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಶೇಕಡಾ 185 – 195 ಕ್ಕೆ ಶೇಕಡಾ 10 ರಷ್ಟು ಏರಿಸಲಾಗುವುದು.

ಒಂದು ವೇಳೆ ದರ ಹೆಚ್ಚಳ ಜಾರಿಗೆ ಬಂದರೆ, 6 ತಿಂಗಳ ಅವಧಿಯಲ್ಲಿ ಇದು 2 ಬಾರಿ ಮದ್ಯದ ದರದಲ್ಲಿ ಮಾಡಿದ ಏರಿಕೆಯಾಗಲಿದೆ. ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಅವರು ಭಾರತೀಯ ನಿರ್ಮಿತ ಮದ್ಯದ ಮೇಲೆ ಶೇ 20ರಷ್ಟು & ಬಿಯರ್ ಮೇಲೆ ಶೇ 175ರಿಂದ ಶೇ 185ಕ್ಕೆ ಹೆಚ್ಚುವರಿ ಅಬಕಾರಿ ಸುಂಕವನ್ನು ಏರಿಸಿದರು.

2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಅಬಕಾರಿಯಿಂದ 36,000 ಕೋಟಿ ರೂ ಆದಾಯ ಗಳಿಸುವ ಗುರಿಯನ್ನು ಹೊಂದಿದೆ ಎಂದು ವರದಿ ಉಲ್ಲೇಖ ಮಾಡಲಾಗಿದೆ.

ಬಡವರ ನೆಚ್ಚಿನ‌ ಕೆಲ ಮದ್ಯದ ಬ್ರ್ಯಾಂಡ್​ಗಳ ಬೆಲೆಯನ್ನು ಕರ್ನಾಟಕ ಸರ್ಕಾರ ಏರಿಸಿದೆ ಎಂದು ಇತ್ತೀಚೆಗೆ ವರದಿಯಾಗಿದೆ. ಮದ್ಯ ಉತ್ಪಾದಕ ಕಂಪನಿಗಳು ಕ್ವಾಟರ್​ಗೆ 20 ರಿಂದ 30 ರೂ. ಹೆಚ್ಚಿಗೆ ಮಾಡಿವೆ ಎಂದು ವರದಿ ತಿಳಿಸಿದೆ.

ಇತರೆ ವಿಷಯಗಳು

ರಕ್ಷಣಾ ಇಲಾಖೆಯಲ್ಲಿ ನೇಮಕಾತಿಗೆ ಅಧಿಸೂಚನೆ: 10th, ಡಿಪ್ಲೊಮ, PUC ಪಾಸಾದವರು ಅರ್ಜಿ ಹಾಕಿ

ಇನ್ಮುಂದೆ ಅಗ್ಗದ ಬೆಲೆಯಲ್ಲಿ ಹಿಟ್ಟು-ಬೇಳೆ-ಈರುಳ್ಳಿ.! ಮೋದಿ ಸರ್ಕಾರದ ಬಹು ದೊಡ್ಡ ಕೊಡುಗೆ

Treading

Load More...