ಹಲೋ ಸ್ನೇಹಿತರೆ, ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಹಾಗೂ ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಶಿಕ್ಷಕರ ಬಡ್ತಿಗೆ ಕೆಲವು ನಿಯಮಗಳನ್ನು ರೂಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅದರಂತೆ ಪ್ರೌಢಶಾಲಾ ನೇಮಕಾತಿ ಸಂದರ್ಭದಲ್ಲಿ ಶೇ.50ರಷ್ಟು ಹುದ್ದೆಗಳನ್ನು ನೇರ ನೇಮಕಾತಿಯಲ್ಲಿ, ಉಳಿದ ಶೇ.50ರಷ್ಟು ಹುದ್ದೆಗಳನ್ನು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ ಎಂದರು. ಈ ಮೂಲಕ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಶಿಕ್ಷಕರ ಬಡ್ತಿ ನಿಯಮಗಳಲ್ಲಿನ ಲೋಪದೋಷದ ಕುರಿತು ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಮಾಡಿದ ಪ್ರಸ್ತಾವನೆಗೆ ಪ್ರತಿಕ್ರಿಯಿಸಿ.
ಪ್ರೌಢಶಾಲಾ ಶಿಕ್ಷಕರ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಯ ಅರ್ಹತಾ ಪರೀಕ್ಷೆ ರದ್ದುಪಡಿಸಲು ಅಧಿವೇಶನ ಮುಗಿಯುವ ಮುನ್ನ ಸಭೆ ನಡೆಸಲಾಗುವುದು ಎಂದು ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇದನ್ನು ಓದಿ: ಡಿಸೆಂಬರ್‌ನಲ್ಲಿ 18 ದಿನ ಬ್ಯಾಂಕ್ ಗಳಿಗೆ ರಜೆ ಘೋಷಿಸಿದ RBI..! ರಜೆ ದಿನದ ಪಟ್ಟಿ ಇಲ್ಲಿ ಚೆಕ್ ಮಾಡಿ
ಅದೇ ರೀತಿ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ನೀಡಿ ಶೇ.75ರಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಉಪನ್ಯಾಸಕರಾಗಿ ಬಡ್ತಿ ಪಡೆಯುವ ಶಿಕ್ಷಕರು ಅರ್ಹತಾ ಪರೀಕ್ಷೆ ಬರೆಯಬೇಕಿದ್ದು, ಸಾಮಾನ್ಯ ವರ್ಗದವರು ಶೇ.55 ಅಂಕ ಹಾಗೂ ಎಸ್ ಸಿ, ಎಸ್ ಟಿ ಶೇ.
ಮರಿತಿಬ್ಬೇಗೌಡ ಸೇರಿದಂತೆ ಹಲವು ವಿಪಕ್ಷ ಸದಸ್ಯರು ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಅಲ್ಲದೇ ಪ್ರೌಢಶಾಲಾ ಶಿಕ್ಷಕರು ಬಡ್ತಿಗಾಗಿ ಪರೀಕ್ಷೆ ಬರೆಯಬೇಕೆಂಬ ನಿಯಮದಿಂದಾಗಿ ಶಿಕ್ಷಕರಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಈ ಬಗ್ಗೆ ಪ್ರೌಢಶಾಲಾ ಶಿಕ್ಷಕರು ನನ್ನ ಬಳಿ ಬಂದು ತಮ್ಮ ಸಮಸ್ಯೆ ಹೇಳಿಕೊಳ್ಳಿ ಎಂದು ಹೇಳಿದ್ದಾರೆ. ಶಿಕ್ಷಕರು ಪರೀಕ್ಷೆ ಬರೆಯುವುದನ್ನು ನಾನು ಒಪ್ಪುವುದಿಲ್ಲ. ಹೀಗಾಗಿ ಶಿಕ್ಷಕರ ಕ್ಷೇತ್ರಗಳನ್ನು ಆಯ್ಕೆ ಮಾಡಿರುವ ವಿಧಾನ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಮುಂದಿನ ವಾರ ಸಭೆ ನಡೆಸಿ ರದ್ದು ಮಾಡಬೇಕೋ ಅಥವಾ ಮಾರ್ಪಾಡು ಮಾಡಬೇಕೋ ಎಂಬುದನ್ನು ನಿರ್ಧರಿಸಲಾಗುವುದು ಎಂದರು.