ಹಲೋ ಸ್ನೇಹಿತರೇ, ಆವಾಸ್ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂ.ಯನ್ನು ಪಾವತಿಸಿ ಮನೆಯನ್ನು ಪಡೆಯಬಹುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಗುರುವಾರ ನಡೆದ ಮಹತ್ವದ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್.ಕೆ. ಪಾಟೀಲ್ ಅವರ ಉಪಸ್ಥಿತಿಯಲ್ಲಿ ವಸತಿ ಸಚಿವ ಜಮೀರ್ ಖಾನ್ ಅವರು ಈ ಘೋಷಣೆಯನ್ನು ಮಾಡಿದರು. ಇದು ಕಾಂಗ್ರೆಸ್ ಚುನಾವಣೆಗೆ ಮುನ್ನ ಘೋಷಿಸದೇ ಇರುವ ಆರನೇ ಗ್ಯಾರಂಟಿ ಎಂದು ಪರಿಗಣಿಸಬಹುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಿ ಇದನ್ನು ಪ್ರಕಟಿಸಲಾಯಿತು. ಹಾಗಾದ್ರೆ ಈ ಯೋಜನೆಯ ಬಗ್ಗೆ ಸಚಿವ ಜಮೀರ್ ಖಾನ್ ಹೇಳಿದ್ದೇನು ಗೋತ್ತಾ?
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ 2015ರಲ್ಲಿ 1,80,253 ಮನೆಗಳು ಮಂಜೂರಾಗಿದ್ದವು.
- ಆದ್ರೆ 2015ರಿಂದ 2023ರ ವರೆಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಒಂದೇ ಒಂದು ಮನೆಯನ್ನು ನೀಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
- 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರತಿ ವರ್ಷವೂ ಒಂದಷ್ಟು ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. 2018ರಿಂದ ಒಂದೇ ಒಂದು ಮನೆಯನ್ನು ಮಂಜೂರಾತಿ ನೀಡಲಾಗಿಲ್ಲ.
- ಆವಾಸ್ ಯೋಜನೆಯ ಪ್ರಕಾರ ಫಲಾನುಭವಿಗಳು 4.5 ಲಕ್ಷ ರೂ. ಪಾವತಿಸಬೇಕು. ಕೇಂದ್ರ ಸರಕಾರ 1.5 ಲಕ್ಷ ರೂ. ನೀಡುತ್ತದೆ, ರಾಜ್ಯ ಸರಕಾರ ಒಂದು ಲಕ್ಷ ರೂ. ನೀಡಬೇಕು.
- ಆದ್ರೆ ರಾಜ್ಯ ಸರ್ಕಾರ ಇದುವರೆಗೂ ತನ್ನ ಪಾಲಿನ ಹಣ ಬಿಡುಗಡೆ ಮಾಡಿರಲಿಲ್ಲ. ಜತೆಗೆ ಹಲವಾರು ಫಲಾನುಭವಿಗಳು 4.5 ಲಕ್ಷ ರೂ. ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿ ಇರುತ್ತಾರೆ.
5 ಬಂಪರ್ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ!! 10ನೇ ಮತ್ತು 12ನೇ ತರಗತಿ ಪಾಸಾದ ಯುವಕರಿಗೆ ಸುವರ್ಣಾವಕಾಶ
ಹಾಗಿದ್ದರೆ ಈಗ ಸರ್ಕಾರ ಮಾಡುವುದೇನು?
ಹೊಸ ಯೋಜನೆಯ ಪ್ರಕಾರ ರಾಜ್ಯ ಸರ್ಕಾರ 500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಣ ಬಿಡುಗಡೆಗೆ ಒಪ್ಪಿದ್ದಾರೆ ಎಂದು ಜಮೀರ್ ಖಾನ್ ಹೇಳಿದರು.
ಈಗ ಮನೆ ಪಡೆಯುವ ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಕಟ್ಟಿದರೆ ಸಾಕು. ಕೇಂದ್ರ ಸರ್ಕಾರದಿಂದ ಒಂದುವರೆ ಲಕ್ಷವನ್ನು ಕೊಡುತ್ತದೆಯಾದರೂ ಈ ಮೊತ್ತವನ್ನು ಅದು ಜಿಎಸ್ಟಿ ಮೂಲಕ ಮರಳಿ ಪಡೆಯುತ್ತದೆ ಎಂದು ಜಮೀರ್ ಖಾನ್ ಹೇಳಿದರು.
ಮನೆಗಳನ್ನು ಪೂರ್ಣಗೊಳಿಸಲು ಎಷ್ಟು ಹಣ ಬೇಕು?
ರಾಜ್ಯದಲ್ಲಿ 1.8 ಲಕ್ಷ ಮನೆಗಳು ನಿರ್ಮಾಣ ಹಂತದಲ್ಲಿವೆ. ಇದೀಗ ಇವುಗಳನ್ನು ಪೂರ್ಣಗೊಳಿಸಲು 6,170 ಕೋಟಿ ರೂ ಬೇಕಾಗಿದೆ. ಇದರೊಂದಿಗೆ 5,403 ಕೋಟಿ ಫಲಾನುಭವಿಗಳ ಮೂಲಕ ಬರಬೇಕಿದೆ. ರಾಜ್ಯ ಸರ್ಕಾರ ಈಗ 500 ಕೋಟಿ ರೂ. ಬಿಡುಗಡೆ ಮಾಡಿದರೆ, ಅಂತಿಮ ಹಂತದಲ್ಲಿರುವ 48,760 ಮನೆಗಳನ್ನು ಪೂರ್ಣಗೊಳಿಸಬಹುದು ಎಂದು ಅವರು ಹೇಳಿದರು. ಮುಂದಿನ ಹಂತಗಳಲ್ಲಿ ಮತ್ತೊಂದು ಕಂತಿನ ಹಣ ಕೊಡಲು ಸಿಎಂ ಒಪ್ಪಿದ್ದಾರೆ ಎನ್ನುವುದನ್ನು ಹೇಳಿದರು.
ಫಲಾನುಭವಿಗಳು 1 ಲಕ್ಷ ಪಾವತಿಸಿದ ಬಳಿಕ ಮುಂದೆ ಉಳಿದ ಮೊತ್ತವನ್ನು ಪಾವತಿಸಬೇಕೇ ಬೇಡವೇ? ಪಾವತಿಸಬೇಕು ಎಂದಾದರೆ ಅದಕ್ಕೆ ಎಷ್ಟು ಸಮಯಾವಕಾಶ ಇರುತ್ತದೆ ಎಂಬ ಅಂಶಗಳನ್ನು ಜಮೀರ್ ಮುಂದೆ ಸ್ಪಷ್ಟಪಡಬೇಕಾಗಿದೆ.
ಇತರೆ ವಿಷಯಗಳು
ಸರ್ಕಾರಿ ನೌಕರರ ಆಫೀಸ್ ಇಷ್ಟು ದಿನ ಬಂದ್!! ಉದ್ಯೋಗಿಗಳಿಗಾಗಿ 2024 ರ ರಜಾದಿನಗಳ ಕ್ಯಾಲೆಂಡರ್ ಬಿಡುಗಡೆ
1.41 ಲಕ್ಷ ರೈತರ ಖಾತೆಗೆ ನಾಳೆಯಿಂದಲೇ ಬೆಳೆ ವಿಮಾ ಹಣ ಜಮಾ! ಸರ್ಕಾರದ ಮಹತ್ವದ ಘೋಷಣೆ!!