rtgh

Scheme

ರಾಜ್ಯದ ಮಹಿಳೆಯರಿಗೆ ಸರ್ಕಾರದ ಗುಡ್ ನ್ಯೂಸ್ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ

Published

on

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಗೃಹಲಕ್ಷ್ಮಿ ಯೋಜನೆಗೆ ಇನ್ನೂ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವ ಮಹಿಳೆಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮತ್ತೆ ಅರ್ಜಿ ಸಲ್ಲಿಸಲು ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Gruha lakshmi scheme New Apply

ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಸಾಕಷ್ಟು ಮಹಿಳೆಯರು ಪ್ರತಿ ತಿಂಗಳು ತಮ್ಮ ಖರ್ಚಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಉಚಿತ 2000 ರೂಪಾಯಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಈ ಯೋಜನೆಗೆ ಸರ್ಕಾರ ಕೆಲವು ನೀತಿ ನಿಯಮಗಳನ್ನು ಜಾರಿ ಮಾಡಿತ್ತು ಆ ನಿಯಮಗಳನ್ನು ಪಾಲಿಸಿ ಅರ್ಜಿ ಸಲ್ಲಿಸಿದ ಬಹುತೇಕ ಎಲ್ಲಾ ಮಹಿಳೆಯರಿಗೂ ಕೂಡ ಪ್ರತಿ ತಿಂಗಳು ರಾಜ್ಯ ಸರ್ಕಾರ ಅವರ ಖಾತೆಗೆ (Bank Account) ನೇರವಾಗಿ 2,000 ರೂಪಾಯಿಗಳನ್ನು ಜಮಾ ಮಾಡುತ್ತಿದೆ.


ಗ್ರಾಮ ಒನ್ ನಲ್ಲಿ ಹೊಸ ಅರ್ಜಿ ಸ್ವೀಕಾರ!

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ನಿಮ್ಮ ಹತ್ತಿರದ ಗ್ರಾಮ ಒನ್‌ ನಲ್ಲಿ ಅದನ್ನು ಪರಿಹರಿಸಿಕೊಳ್ಳಬಹುದಾಗಿದೆ. ಉದಾಹರಣೆಗೆ ಈ ಯೋಜನೆಯ ಆರಂಭವಾದಗ ರೇಷನ್‌ ಕಾರ್ಡ್‌ನಲ್ಲಿ ಮೊದಲ ಹೆಸರು ಮನೆ ಯಜಮಾನಿಯದೇ ಅಗಿರಬೇಕು, ಹಾಗಿದ್ದರೆ ಮಾತ್ರ ಹಣ ವರ್ಗಾವಣೆ ಮಾಡಲಾಗುವುದು ಎಂದು ಆದೇಶ ಹೊರಡಿಸಿತ್ತು.

ಅದೇ ರೀತಿ ರೇಷನ್‌ ಕಾರ್ಡ್‌ ನಲ್ಲಿ ಆಧಾರ್‌ ಲಿಂಕ್‌ ಹಾಗೂ ಆಧಾರ್‌ ಕಾರ್ಡ್ನಲ್ಲಿ ಬ್ಯಾಂಕ್‌ ಖಾತೆ ಲಿಂಕ್‌ ಆಗಿರುವುದು ಕಡ್ಡಾಯವಾಗಿದೆ. ಮಹಿಳೆಯರು ತಮ್ಮ ಬ್ಯಾಂಕ್‌ ಖಾತೆಗೆ ಈಕೆ ವೈ ಸಿ (E-KYC) ಮಾಡಿಸಿಕೊಳ್ಳದೆ ಇದ್ದರೆ ಯಾವುದೇ ಕಾರಣಕ್ಕು ಹಣ ಖಾತೆಗೆ ಜಮಾ ಆಗುವುದಿಲ್ಲ. ಈ ಕಾರಣದಿಂದ ಸರ್ಕಾರ ನಿಮ್ಮ ಹತ್ತಿರದ ಗ್ರಾಮ ಒನ್‌ ನಲ್ಲಿ ನಿಮ್ಮ ಯಾವುದೇ ಸಮಸ್ಯೆ ಇದ್ದರು ಪರಿಹರಿಸಿಕೊಳ್ಳಲು ಅವಕಾಶ ನೀಡಿದೆ.

ಇದನ್ನೂ ಸಹ ಓದಿ: ಜನವರಿ 15 ರಿಂದ ಈ ಯೋಜನೆ ಮೊತ್ತ ಹೆಚ್ಚಳ!! ಮೋದಿಯಿಂದ ಮತ್ತೊಂದು ಮಹತ್ವದ ಘೋಷಣೆ

ಗ್ರಾಮ ಒನ್‌ ನಲ್ಲಿ ಗೃಹಲಕ್ಷ್ಮಿ ಅರ್ಜಿ ಪರಿಶೀಲನೆ ಮಾಡಿಕೊಳ್ಳುವುದು ಮಾತ್ರವಲ್ಲದೆ, ಸರ್ಕಾರ ಈಗ ಹೊಸ ಅರ್ಜಿ ಸಲ್ಲಿಕೆಗೂ ಕೂಡ ಅವಕಾಶ ನೀಡುತ್ತಿದೆ.

ಅರ್ಜಿ ಸಲ್ಲಿಸಿದ ಕೋಟ್ಯಾಂತರ ಮಹಿಳೆಯರ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮಾ ಮಾಡುವ ಪ್ರಕ್ರಿಯೆಯಲ್ಲಿ ಕೆಲವೂಂದು ದೋಷಗಳು ಸಂಭವಿಸಿದ್ದು, ಈ ಕಾರಣದಿಂದ ಗೃಹಲಕ್ಷ್ಮಿ ಹೊಸ ಅರ್ಜಿ ಸಲ್ಲಿಕೆಯನ್ನು ಸ್ವಲ್ಪ ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಈ ಕಾರಣದಿಂದ ರಾಜ್ಯದ ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳವಲ್ಲಿ ವಂಚಿತರಾಗಿದ್ದರು. ಇದೇ ಕಾರಣಕ್ಕೆ ಈ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ನಿಮ್ಮ ಹತ್ತಿರ ಗ್ರಾಮ ಒನ್‌ ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!

  • ಆಧಾರ್ ಕಾರ್ಡ್ (ಗಂಡ ಹೆಂಡತಿ ಇಬ್ಬರ ಆಧಾರ್ ಕಾರ್ಡ್ ಸಲ್ಲಿಸಬೇಕು)
  • ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
  • ರೇಷನ್ ಕಾರ್ಡ್

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು?

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಕುಟುಂಬದ ಯಾವುದೇ ಸದಸ್ಯರು ಕೂಡ ಆದಾಯ ತೆರಿಗೆ ಪಾವತಿ (tax payers) ಮಾಡುವವರಾಗಿರಬಾರದು.
  • ಕುಟುಂಬದಲ್ಲಿ ಯಜಮಾನಿ ಅಥವಾ ಮೊದಲ ಮಹಿಳೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಬಿಪಿಎಲ್ (BPL card), ಅಂತ್ಯೋದಯ ಕಾರ್ಡ್ ಹೊಂದಿರುವವರು ಮಾತ್ರವಲ್ಲದೆ ಎಪಿಎಲ್ ಕಾರ್ಡ್ (APL card) ಹೊಂದಿರುವ ಮಹಿಳೆಯರು ಸಹ ಅರ್ಜಿ ಸಲ್ಲಿಸಬಹುದು.
  • ಈ ಯೋಜನಗೆ ಲಾಭ ಪಡೆಯುವ ಮಹಿಳೆ ಸರ್ಕಾರಿ ಉದ್ಯೋಗದಲ್ಲಿ ಇದ್ದರೆ ಅರ್ಜಿ ಸಲ್ಲಿಸುವಂತಿಲ್ಲ.
  • ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಯಾವುದು ಎಂದು ತಿಳಿದುಕೊಳ್ಳಲು https://sevasindhu.karnataka.gov.in/gramaone/center_kan.html ಇಲ್ಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಿಳಿದುಕೊಳ್ಳಬಹುದು

ಇತರೆ ವಿಷಯಗಳು:

KKRTC ಯಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನ, ಈ ದಾಖಲೆಗಳೊಂದಿಗೆ ಜನವರಿ 11 ರಂದು ಸಂದರ್ಶನ

ಎಲ್ಲರ ಖಾತೆಗೂ ಮೋದಿ ಸರ್ಕಾರದಿಂದ 2.50 ಲಕ್ಷ ಜಮಾ! ಈ ಲಿಸ್ಟ್‌ ನಲ್ಲಿ ನೋಂದಣಿಯಾಗಿದ್ದರೆ ಮಾತ್ರ!

Treading

Load More...