ಹಲೋ ಸ್ನೇಹಿತರೇ, ಕರ್ನಾಟಕದಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ * 1,275 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅದರಂತೆ ಈ 3 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಸೇರಿ ಇತರೆ ಮೂಲಸೌಕರ್ಯಗಳಿಗೆ ಅನುಮೋದನೆ ನೀಡಿದೆ.
ಮುಂದಿನ 3 ವರ್ಷಗಳಲ್ಲಿ ಎಲ್ಲಾ ಯೋಜನೆಗಳು ಅನುಷ್ಠಾನಗೊಳ್ಳಲಿದೆ. ಶೇ.70ರಷ್ಟು ಕನ್ನಡಿಗರು ಉದ್ಯೋಗವನ್ನು ಪಡೆದುಕೊಳ್ಳಲಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಹಾಗೆ ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ ಒಡಂಬಡಿಕೆಗಳ ಪೈಕಿ 7 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆಯನ್ನು ಈಗಾಗಲೇ ನೀಡಲಾಗಿದ್ದು, ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭ ಮಾಡಲು 3-4 ವರ್ಷಗಳು ಹಿಡಿಯುತ್ತವೆ ಎಂದು ಅವರು ಹೇಳಿದರು.
ಸರ್ಕಾರದ ನಿಯಮಾವಳಿಗಳ ಪ್ರಕಾರ ಈ ಉದ್ಯಮಗಳಲ್ಲಿ ‘ಡಿ’ ಗ್ರೂಪ್ ಹುದ್ದೆಗಳನ್ನು ಕನ್ನಡಿಗರಿಗೆ ಶೇಕಡಾ 100 ರಷ್ಟು ಮತ್ತು ಒಟ್ಟಾರೆಯಾಗಿ ಶೇಕಡಾ 70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕೆನ್ನುವ ನಿಯಮ ರೂಪಿಸಲಾಗಿದೆ ಎಂದು ಎಂದು ಸಚಿವ ಎಂಬಿ.ಪಾಟೀಲ್ ಹೇಳಿದರು.
ಇತರೆ ವಿಷಯಗಳು:
ಪಿಂಚಣಿಯಲ್ಲಿ ಹೊಸ ನಿಯಮ! 40 ನೇ ವಯಸ್ಸಿನಲ್ಲಿ 50,000 ಪಿಂಚಣಿಯನ್ನು ಪಡೆಯಬಹುದು ಹೇಗೆ ಗೊತ್ತಾ?
ಮನೆಯಲ್ಲಿಯೇ ಕುಳಿತು ಲಕ್ಷ ಲಕ್ಷ ಸಂಪಾದಿಸಿ.!! ಯಾವುದು ಗೊತ್ತಾ ಈ ಕೆಲಸ.?? ಇಲ್ಲಿದೆ ಕಂಪ್ಲೀಟ್ ಮಾಹಿತಿ